Tuesday, April 22, 2025
Google search engine

Homeರಾಜ್ಯಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ

ಬೆಳಗಾವಿ: ಸರ್ಕಾರಿ ಶಾಲಾ ಮಕ್ಕಳು ಬಸ್ಸಿನಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಆದರೆ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಮಕ್ಕಳು ವಿಮಾನದಲ್ಲಿ ಪ್ರವಾಸ ಮಾಡಿದ್ದಾರೆ.

ಮಕ್ಕಳ ಹಾಜರಾತಿ ಹೆಚ್ಚಿಸುವ ಸಲುವಾಗಿ ಶಿಕ್ಷಕ ಪ್ರಕಾಶ್ ದೇವಣ್ಣವರ್ ಸುಮಾರು ಎರಡೂವರೆ ಲಕ್ಷ ರೂ. ಖರ್ಚು ಮಾಡಿ ೧೭ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ನೀಡಿದ್ದಾರೆ. ವಿದ್ಯಾರ್ಥಿಗಳಿಂದ ತಲಾ ಮೂರು ಸಾವಿರ ರೂ. ಹಣ ಪಡೆದ ಶಿಕ್ಷಕ ಉಳಿದ ಹಣವನ್ನು ತಾವೇ ಹಾಕಿದ್ದಾರೆ.

ಗುರುವಾರ ಸಂಜೆ ಬೆಳಗಾವಿಯಿಂದ ಹೈದರಾಬಾದ್ ಹೋಗಿರುವ ಮಕ್ಕಳು ರಾಮೋಜಿ ಫಿಲ್ಮ್ ಸಿಟಿ, ಚಾರ್ ಮಿನಾರ್, ಗೋಲ್ಕೊಂಡ ಸೇರಿ ಹಲವು ಸ್ಥಳಗಳನ್ನು ನೋಡಿದ್ದಾರೆ. ಶನಿವಾರ ಸಂಜೆ ಶಿಕ್ಷಕ ಮತ್ತು ವಿದ್ಯಾರ್ಥಿಗಳು ಬೆಳಗಾವಿಗೆ ವಾಪಸ್ ಆಗಲಿದ್ದಾರೆ

RELATED ARTICLES
- Advertisment -
Google search engine

Most Popular