Saturday, April 19, 2025
Google search engine

Homeರಾಜ್ಯಸುದ್ದಿಜಾಲಅಕ್ರಮ ಮದ್ಯ ಮಾರಾಟ ವಿರುದ್ಧ ಸಮರ ಸಾರಿದ ನಾರಿಯರು

ಅಕ್ರಮ ಮದ್ಯ ಮಾರಾಟ ವಿರುದ್ಧ ಸಮರ ಸಾರಿದ ನಾರಿಯರು

ನಂಜನಗೂಡು : ನಂಜನಗೂಡು ತಾಲೂಕಿನ ಹೊರಳವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಗ್ರಾಮದ ಮಹಿಳೆಯರು ಮತ್ತು ಯುವಕರು ಬೀದಿಗಿಳಿದು ಇಂದು ಹೋರಾಟ ನಡೆಸುತ್ತಿದ್ದಾರೆ.

ಗ್ರಾಮದ ಯುವಕರು ಮತ್ತು ಮಹಿಳೆಯರು ಮಧ್ಯಪಾನ ಮುಕ್ತ ಗ್ರಾಮವನ್ನಾಗಿ ಮಾಡಲು ತೊಡೆತಟ್ಟಿ ನಿಂತಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಮಧ್ಯಪಾನ ವ್ಯಸನ ವಿರೋಧಿ ಅಭಿಯಾನ ಜನ ಜಾಗೃತಿ ಕಾರ್ಯಕ್ರಮಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮ ಮದ್ಯಪಾನದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ಜಾಥ ನಡೆಸಿದ್ದಾರೆ.

ಗ್ರಾಮದಲ್ಲಿ ಎಂಟು ಕಡೆ ಆಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದ್ದು, ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿದೆ. ಗ್ರಾಮಸ್ಥರು ಹೆಚ್ಚಾಗಿ ಮಧ್ಯೆ ಸೇವನೆ ಮಾಡುತ್ತಿರುವುದರಿಂದ ಮನೆ ಮತ್ತು ಗ್ರಾಮದಲ್ಲಿ ಗಲಾಟೆಗಳು ನಡೆಯುತ್ತಿವೆ. ನಮಗೆ ನೆಮ್ಮದಿಯಿಂದ ಬದುಕಲು ಆಗುತ್ತಿಲ್ಲ. ಕುಡಿದುಕೊಂಡು ಗಲಾಟೆ ಮಾಡುತ್ತಿದ್ದಾರೆ. ಕೂಡಲೇ ಅಕ್ರಮ ಮಧ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರು ಮತ್ತು ಯುವಕರು ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಿನನಿತ್ಯ ಅನುಭವಿಸುತ್ತಿರುವ ಕುಡಿತದಿಂದಾಗುವ ನೋವಿನ ವಿರುದ್ಧ ಎಲ್ಲರೂ ಸ್ವಯಂ ಪ್ರೇರಣೆಯಿಂದ ಹೋರಾಟಕ್ಕಿಳಿದಿದ್ದಾರೆ.

ಗಂಡಂದಿರ, ತಂದೆಯಂದಿರ, ಸಹೋದರರ ಮದ್ಯ ವ್ಯಸನದಿಂದ ಇನ್ನಿಲ್ಲದ ಸಂಕಷ್ಟವನ್ನು ಅನುಭವಿಸಿದ ಸಂತ್ರಸ್ತ ಮಹಿಳೆಯರೇ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಲಾಗಿದೆ.

ಕೂಡಲೇ ಅಕ್ರಮ ಮಧ್ಯ ಮಾರಾಟವನ್ನು ನಿಲ್ಲಿಸಬೇಕು. ಮದ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು, ಮಧ್ಯಪಾನ ಮುಕ್ತ ಗ್ರಾಮವನ್ನಾಗಿ ಮಾಡಬೇಕು ಎಂದು ಬಿಳಿಗೆರೆ ಪೊಲೀಸ್ ಠಾಣೆಗೆ ಗ್ರಾಮದ ಯುವಕರು ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವಕರ ಸಂಘದ ಕಾರ್ಯದರ್ಶಿ ವೀರಭದ್ರಸ್ವಾಮಿ, ಕಾರ್ಯದರ್ಶಿ ಮಹೇಶ್, ರವಿಪ್ರಕಾಶ್, ಗೀರೀಶ್, ದೀಲಿಪ್, ಮಧು, ಅಭಿಷೇಕ್, ಪ್ರಕಾಶ್, ಚಿಕ್ಕತಾಯಮ್ಮ, ಸುಧಮ್ಮ, ಕಮಲಮ್ಮ ಸೇರಿದಂತೆ ಯುವಕರು ಮತ್ತು ಮಹಿಳೆಯರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular