Saturday, April 19, 2025
Google search engine

Homeಸ್ಥಳೀಯಒನಕೆ ಓಬವ್ವನ ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ರೇಣುಕರಾಜ್

ಒನಕೆ ಓಬವ್ವನ ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ರೇಣುಕರಾಜ್

ಮೈಸೂರು: ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕ ರಾಜ್ ತಿಳಿಸಿದರು

ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ ತನ್ನ ಮನೆಯಲ್ಲಿ ಆಹಾರ ಸಂಸ್ಕೃರಣೆಗೆ ಬಳಸುವಂತಹ ಒನಕೆಯನ್ನೇ ಆಯುಧವಾಗಿ ಬಳಸಿ ನೂರಾರು ಸೈನಿಕರ ರುಂಡಗಳನ್ನು ಚಂಡಾಡಿ, ಕೋಟೆಯನ್ನು ರಕ್ಷಿಸಿ ಮಹಾಮಾತೆ ನಮ್ಮ ಓಬವ್ವ, ಇಂತಹವರ ಚರಿತ್ರೆಗಳು ನಾಡಿನಾಚೆಗೂ ಪಸರಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ಮನೋರೋಗ ತಜ್ಞರಾದ ಡಾಕ್ಟರ್ ರೇಖಾ ಮಾತನಾಡಿ, ವೀರ ವಿನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ಐಕ್ಯತೆಗೆ ಪಣತೊಡಬೇಕು.

ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಮಾತನಾಡಿ ಒರ್ವ ಕೋಟೆ ಕಾವಲುಗಾರನ ಹೆಂಡತಿಯಾಗಿ, ಕೋಟೆಗೆ ಆಪತ್ತು ಎದುರಾದಾಗ, ಸಮಯಪ್ರಜ್ಞೆಯಿಂದ ವೈರಿಗಳ ರುಂಡ ಚಂಡಾಡಿದ ವೀರ ವನಿತೆ ಓಬವ್ವ ಎಲ್ಲರಿಗೂ ಮಾದರಿಯಾಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್, ಮೂಡ ಮಾಜಿ ಸದಸ್ಯರಾದ ನವೀನ್ ಕುಮಾರ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ, ಮನೋರೋಗ ತಜ್ಞರಾದ ಡಾ ರೇಖಾ ಮನಶಾಂತಿ, ಸಮೃದ್ಧಿ ಪತ್ರಿಕೆ ಸಂಪಾದಕರಾದ ಸಹನಗೌಡ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಚಕ್ರಪಾಣಿ, ಸಚಿಂದ್ರ, ವಿಘ್ನೇಶ್ವರ ಭಟ್, ಸುದರ್ಶನ್, ಶ್ರೀನಿವಾಸ್, ಚರಣ್, ರಾಮು, ನಾಗೇಶ್ ಯಾದವ್, ಸುಕನ್ಯ, ನಾಗಮಣಿ , ಮಹಾನ್ ಶ್ರೇಯಸ್, ಹಾಗೂ ಇನ್ನಿತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular