Saturday, April 19, 2025
Google search engine

Homeಅಪರಾಧಚನ್ನಪಟ್ಟಣ ಉಪಚುನಾವಣೆ : ಅಕ್ರಮವಾಗಿ ಸಂಗ್ರಹಿಸಿದ್ದ 29 ಕೋಟಿ ಮೌಲ್ಯದ ಮದ್ಯ ಜಪ್ತಿ

ಚನ್ನಪಟ್ಟಣ ಉಪಚುನಾವಣೆ : ಅಕ್ರಮವಾಗಿ ಸಂಗ್ರಹಿಸಿದ್ದ 29 ಕೋಟಿ ಮೌಲ್ಯದ ಮದ್ಯ ಜಪ್ತಿ

ರಾಮನಗರ : ನಾಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಮಾಡಿದ್ದಾರೆ. ಇದೀಗ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಇದೀಗ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಒಂದು ತಿಂಗಳಲ್ಲಿ ಒಟ್ಟು 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣ ಚುನಾವಣೆ ಘೋಷಣೆಯಾದ ಬಳಿಕ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಇದುವರೆಗೆ 151 ಪ್ರಕರಣಗಳನ್ನು ಅಬಕಾರಿ ಇಲಾಖೆ ದಾಖಲಿಸಿಕೊಂಡಿದೆ.

ಮದ್ಯದ ಜೊತೆಗೆ ಮೂರು ವಾಹನಗಳನ್ನು ಕೂಡ ಜಪ್ತಿ ಮಾಡಿಕೊಳ್ಳಲಾಗಿದೆ. ದಾಖಲೆ ಹಾಗೂ ಪರವಾನಿಗೆ ಇಲ್ಲದೆ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಯಾವುದೇ ದಾಖಲೆ ಹಾಗೂ ಪರವಾನಿಗೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ಜಪ್ತಿ ಮಾಡಿಕೊಂಡಿರುವ ಕುರಿತು ಅಬಕಾರಿ ಇಲಾಖೆ ಮಾಹಿತಿ ನೀಡಿದೆ.

RELATED ARTICLES
- Advertisment -
Google search engine

Most Popular