ಗುಂಡ್ಲುಪೇಟೆ: ಮದ್ಯದ ಪೌಚ್‍ಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಗುಂಡ್ಲುಪೇಟೆಯ ಪ್ರಶಾಂತ್ ಬಂಧಿತ ಆರೋಪಿ. ಈತ ಗ್ರಾಮಾಂತರ ಪ್ರದೇಶಕ್ಕೆ ಮದ್ಯದ ಪೌಚ್‍ಗಳನ್ನು ಎನ್.ಆರ್.ವೈನ್ಸ್ ನಿಂದ ಅಕ್ರಮವಾಗಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸಬ್ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆಸಿ ಮಾಲು ಸಮೇತ ಬಂಧಿಸಲಾಗಿದೆ.
ಇನ್ನೂ ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.