ಬೆಂಗಳೂರು : ಇಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅವರ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.