Saturday, April 19, 2025
Google search engine

Homeರಾಜ್ಯಸುದ್ದಿಜಾಲಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್

ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್

ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿ.೧೪ ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು ೩೧ ನ್ಯಾಯಾಲಯಗಳಲ್ಲಿ ಡಿ.೧೪ ರಂದು ನಡೆಯುವ ಮೆಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು.

ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು ೩೧ ನ್ಯಾಯಾಲಯಗಳಲ್ಲ್ಲಿ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.೦೮೩೯೨-೨೭೮೦೭೭ ಗೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular