Tuesday, April 22, 2025
Google search engine

Homeಅಪರಾಧಕಾನೂನುಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನ.23ಕ್ಕೆ

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನ.23ಕ್ಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಇದೀಗ ವಿಚಾರಣೆ ನಿಗದಿಪಡಿಸಲು ಸಿಎಂ ಸಿದ್ದರಾಮಯ್ಯ ವಕೀಲರು ಮನವಿ ಮಾಡಿದ್ದಾರೆ. ಹಾಗಾಗಿ ನ್ಯಾ.ಎನ್.ವಿ ಅಂಜಾರಿಯ ಹಾಗೂ ನ್ಯಾ.ಕೆ.ವಿ ಅರವಿಂದ್ ಅವರಿದ್ದ ಪೀಠದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ. ಅಭಿಷೇಕ್ ಸಿಂಘವಿ ಮನವಿ ಮೇರೆಗೆ ವಿಚಾರಣೆ ನವೆಂಬರ್ 23ಕ್ಕೆ ನಿಗದಿ ಮಾಡಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಗೊಳಿಸಿತ್ತು.

ಜುಲೈ 26 ರಂದು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಿಎಂ ರಹಿತವಾದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಿತ್ತು. ಆದರೂ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪಾಲಿಸದೇ ಲೋಪವೆಸಗಿದ್ದಾರೆ. 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿ ರಾಜ್ಯಪಾಲರ ಅನುಮತಿ ಕೇಳಬೇಕು.

ಆದರೆ ಖಾಸಗಿ ವ್ಯಕ್ತಿಯ ದೂರು ಪರಿಗಣಿಸಿ ಅನುಮತಿ ನೀಡಲಾಗಿದೆ. ರಾಜ್ಯಪಾಲರು ಅನುಮತಿ ನೀಡುವಾಗ ವಿವೇಚನೆ ಬಳಸಿಲ್ಲ. ಈ ಅಂಶಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಪರಿಗಣಿಸಿಲ್ಲ. ಏಕಸದಸ್ಯ ಪೀಠ ನ್ಯಾಯಾಂಗದ ಪರಿಶೀಲನಾ ಅಧಿಕಾರವನ್ನು ಸೂಕ್ತವಾಗಿ ಬಳಸಿಲ್ಲ. ಹೀಗಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಸಿದ್ದರಾಮಯ್ಯ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES
- Advertisment -
Google search engine

Most Popular