Saturday, April 19, 2025
Google search engine

Homeರಾಜ್ಯಜವಾಹರ್ ಲಾಲ್ ನೆಹರು ಆಧುನಿಕ ಭಾರತದ ಶಿಲ್ಪಿ: ಸಿಎಂ ಸಿದ್ದರಾಮಯ್ಯ

ಜವಾಹರ್ ಲಾಲ್ ನೆಹರು ಆಧುನಿಕ ಭಾರತದ ಶಿಲ್ಪಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ವಿಧಾನಸೌಧದ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರು ಅವರ ೧೩೫ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರು ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿ ಇದ್ದಕಾರಣ ಅವರನ್ನು ಚಾಚಾ ನೆಹರು ಎಂದು ಕರೆಯಲಾಗುತ್ತಿತ್ತು ಎಂದು ಹೇಳಿದರು.
ಸುಮಾರು ೧೭ ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು.

ಸಮಾಜವಾದಿಯಾಗಿದ್ದ ನೆಹರು ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರು, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. ೧೭ ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರು ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರು ಅವರ ಕೊಡುಗೆ ಅಪಾರ. ಆಹಾರ ಸ್ವಾವಲಂಬನೆಗೆ ನೆಹರು, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದು ಹಾಡಿ ಹೊಗಳಿದರು.

RELATED ARTICLES
- Advertisment -
Google search engine

Most Popular