Wednesday, April 16, 2025
Google search engine

Homeಸ್ಥಳೀಯಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ದೂರು

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ದೂರು

ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಲಕ್ಷ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಎರಡು ತಿಂಗಳ ಹಿಂದೆ ಸ್ನೇಹಮಯಿ‌ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನನ್ನು ಸಂಪರ್ಕಿಸಿದ್ದರು. ಪ್ರಕರಣ ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರೂ ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ‌ ಕೃಷ್ಣ ವಿರುದ್ಧ ಆರೋಪ‌ ಮುಂದುವರಿಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ದೂರಿದರು.

ಸ್ನೇಹಮಯಿ‌ ಕೃಷ್ಣ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ 44 ಪ್ರಕರಣ ದಾಖಲಾಗಿದ್ದು, ಇದರಲ್ಲಿ 22 ಪ್ರಕರಣಗಳ ಎಫ್ ಐಆರ್ ನಮ್ಮಲ್ಲಿದೆ. ಈತ ರೌಡಿಶೀಟರ್ ಆಗಿದ್ದರೂ ಕಳೆದ ಮೂರುವರೆ ವರ್ಷದಿಂದ ಪೊಲೀಸರು ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಬ್ಲಾಕ್ ಮೇಲರ್ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಭಾನುವಾರ ಬೆಳಿಗ್ಗೆ 10 ಗಂಟೆ ಒಳಗೆ ಎಫ್ ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಪೊಲೀಸ್ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ ಎಂದರು.

ಪಾರ್ವತಿ ಅವರ ವಿರುದ್ಧ ನಕಲಿ ಚಲನ್ ಸೃಷ್ಟಿಸಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅದಕ್ಕೆ ನಕಲಿ ಸೀಲ್ ಬಳಸಲಾಗಿದೆ. ಈ ದಾಖಲೆಯನ್ನು ನಾವು ಕೊಟ್ಟೇ ಇಲ್ಲ ಎಂದು ಮುಡಾ ಅಧಿಕಾರಿಗಳು ಹೇಳುತ್ತಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ಸಂದರ್ಭದಲ್ಲಿ ತನಿಖೆಯ ನೇತೃತ್ವವನ್ನು ವಹಿಸಿರುವ ಅಧಿಕಾರಿಗಳ ಮೇಲೆ ಒತ್ತಡ ತರಲು ಸ್ನೇಹಮಯಿ ಕೃಷ್ಣ ಸುಳ್ಳು ದಾಖಲೆಗಳನ್ನು ಮಾಧ್ಯಮಗಳ ಮುಂದೆ ಇಡುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್ ಕುಮಾರ್, ನಗರ ಘಟಕದ ಅಧ್ಯಕ್ಷ ಆರ್. ಮೂರ್ತಿ, ಮುಖಂಡರಾದ ಬಿ.ಎ‌ಂ. ರಾಮು, ಮಹೇಶ್ ಜೊತೆಗಿದ್ದರು.

RELATED ARTICLES
- Advertisment -
Google search engine

Most Popular