Saturday, April 19, 2025
Google search engine

Homeಅಪರಾಧಹೃದಯಾಘಾತದಿಂದ ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಲಿಂಗೈಕ್ಯ

ಹೃದಯಾಘಾತದಿಂದ ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಲಿಂಗೈಕ್ಯ

ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕಿನ ಮಂಟೂರು ಅಡವಿ ಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಮನಿಪ್ರ ಶಿವಲಿಂಗೇಶ್ವರ ಸ್ವಾಮೀಜಿ (82) ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.

ಸ್ವಾಮೀಜಿ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು.

ಶ್ರೀಗಳು ಹುಬ್ಬಳ್ಳಿ ತಾಲೂಕಿನ ಮಂಟೂರು ಹಾಗೂ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಅಡವಿ ಸಿದ್ಧೇಶ್ವರ ಮಠ, ಹುಬ್ಬಳ್ಳಿ ಹರುಷದೇವರ ಮಠ, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗೆರಕೊಪ್ಪ- ಬೊಪ್ಪಗೊಂಡನಕೊಪ್ಪ ಇಂದುಧರೇಶ್ವರ ಮಠ, ಬೀದರ ಜಿಲ್ಲೆ ಬಸವಕಲ್ಯಾಣ ಕೆಳಗಿ ಪೀಠ ಹಾಗೂ ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠ ಪೀಠಾಧಿಪತಿಗಳಾಗಿದ್ದರು.

RELATED ARTICLES
- Advertisment -
Google search engine

Most Popular