Saturday, April 19, 2025
Google search engine

Homeಅಪರಾಧಕಾನೂನುಶೀಘ್ರದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ : ಕಮಿಷನರ್ ಬಿ.ದಯಾನಂದ

ಶೀಘ್ರದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ : ಕಮಿಷನರ್ ಬಿ.ದಯಾನಂದ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಇತ್ತೀಚಿಗೆ ನಟ ದರ್ಶನ್ ಬಳ್ಳಾರಿ ಜೈಲಿಂದ ಬಿಡುಗಡೆಯಾಗಿದ್ದರು.ಇದೀಗ ಪೊಲೀಸರು ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿ ದರ್ಶನ್ಗೆ ಜಾಮೀನು ಮಂಜೂರು ವಿಚಾರವಾಗಿ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನ ವಿಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮೇಲ್ಮನವಿ ಸಲ್ಲಿಸಲು ಈಗಾಗಲೇ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಕನ್ನಡದಲ್ಲಿರುವ ಮಾಹಿತಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ನಟ ದರ್ಶನ್ ಎರಡು ದಿನ ಪತ್ನಿ ಮಗ ಹಾಗೂ ಕುಟುಂಬದ ಜೊತೆಗೆ ಕಾಲ ಕಳೆದರು. ನಂತರ ನೇರವಾಗಿ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೈಕೋರ್ಟಿನ ಷರತ್ತಿನ ಮೇರೆಗೆ ಒಂದು ವಾರದಲ್ಲಿ ನಟ ದರ್ಶನ್ ಅವರ ವೈದ್ಯಕೀಯ ವರದಿ ಹೈಕೋರ್ಟಿಗೆ ನಟ ದರ್ಶನ್ ಅವರ ಪರ ವಕೀಲರು ಸಲ್ಲಿಸಿದ್ದಾರೆ. ಇದೀಗ ನಟ ದರ್ಶನ್ ಬಿಡುಗಡೆಯಾದರೂ ಕೂಡ ನೆಮ್ಮದಿ ಇಲ್ಲದಂತಾಗಿದ್ದು, ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular