ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವು ಡಿಸೆಂಬರ್ ೯ ರಿಂದ ಆರಂಭವಾಗಲಿದೆ.
ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಡಿ. ೯ ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶವು ಡಿ.೨೦ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.
ಡಿಸೆಂಬರ್ ೯ರಂದು ಬೆಳಿಗ್ಗೆ ೧೧ ಗಂಟೆಗೆ ಅಧಿವೇಶನ ಆರಂಭವಾಗುತ್ತಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಅಂತಿಮ ದಿನಾಂಕ ನಿಗದಿಯಾಗುತ್ತಿದ್ದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸಜ್ಜಾಗುತ್ತಿದ್ದಾರೆ. ಪ್ರತಿಭಟನೆಯಲ್ಲಿ ೧ ಲಕ್ಷಕ್ಕೂ ಅಧಿಕ ರೈತರು ಭಾಗವಹಿಸುವ ನಿರೀಕ್ಷೆ ಇದೆ.