Friday, April 11, 2025
Google search engine

Homeರಾಜ್ಯಸಿಎಂ ಜೊತೆಗಿನ ಸಭೆ ಯಶಸ್ವಿ: ನಾಳಿನ ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಸಿಎಂ ಜೊತೆಗಿನ ಸಭೆ ಯಶಸ್ವಿ: ನಾಳಿನ ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನವೆಂಬರ್ 20ರಂದು ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಮದ್ಯಮಾರಾಟ ಬಂದ್ ಮುಷ್ಕರವನ್ನ ವಾಪಸ್ ಪಡೆಯಲಾಗಿದೆ.

ಇಂದು ನಡೆದ ಸಿಎಂ ಸಿದ್ದರಾಮಯ್ಯ ಜೊತೆಗಿನ ಸಭೆ ಯಶಸ್ವಿಯಾದ ಹಿನ್ನೆಲೆ ನಾಳಿನ ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್ ಪಡೆಯಲಾಗಿದೆ. ಸರ್ಕಾರದ ಮುಂದೆ ಅಬಕಾರಿ ಇಲಾಖೆಯ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲು ಕರೆ ನೀಡಲಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ.

ಇಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕದ ಅಧ್ಯಕ್ಷರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದೆ. ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯ ಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ, ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

RELATED ARTICLES
- Advertisment -
Google search engine

Most Popular