ದೆಹಲಿ: ಏರ್‌ಸೆಲ್-ಮ್ಯಾಕ್ಸಿಸ್ ಮತ್ತು ಐಎನ್‌ಎಕ್ಸ್ ಮೀಡಿಯಾ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಎಂದು ವರದಿಯಾಗಿದೆ.
ಏರ್‌ಸೆಲ್ ಮ್ಯಾಕ್ಸಿಸ್ ಹಗರಣ ಮತ್ತು ಐಎನ್‌ಎಕ್ಸ್ ಮೀಡಿಯಾ ಹಗರಣದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ಸಿಬಿಐ ದಾಖಲಿಸಿರುವ ಎರಡು ಪ್ರಕರಣ ಮತ್ತು ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಇ.ಡಿ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಆರೋಪಿಗಳಾಗಿದ್ದಾರೆ.
ಈ ಹಗರಣ ೨೦೦೬ರಲ್ಲಿ ನಡೆದಿದ್ದು, ಆಗ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದರು. ಬಳಿಕ ಈ ಪ್ರಕರಣ ಸಂಬಂಧ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಸೆರೆವಾಸವನ್ನೂ ಅನುಭವಿಸಿದ್ದರು.