Saturday, April 19, 2025
Google search engine

Homeರಾಜ್ಯಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಂದ ಲಂಚ ಪಡೆಯಲು ಇದು ಪಿತೂರಿ: ಆರ್ ಅಶೋಕ್ ಕಿಡಿ

ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಂದ ಲಂಚ ಪಡೆಯಲು ಇದು ಪಿತೂರಿ: ಆರ್ ಅಶೋಕ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅನ್ನಭಾಗ್ಯ ಎಂದುಕೊಂಡು ಬಡವರಿಗೆ ಕನ್ನಭಾಗ್ಯ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಡವರಿಗೆ ಉಣ್ಣಲು ಅನ್ನ ಕೊಡಬೇಕಾದ ಸರ್ಕಾರ ಅನ್ನವನ್ನು ಕದಿಯುವ ಕೆಲಸ ಮಾಡಿದೆ ಎಂದು ಟೀಕಿಸಿದರು.

ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದುಮಾಡಲಾಗಿದೆ ಎಂದು ಸಿಎಂ ಹೇಳುತ್ತಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ೨೫೦ ಸರ್ಕಾರಿ ನೌಕರರ ಬಳಿ ಕಾರ್ಡ್ ಇತ್ತು ಎಂದರೂ ಅದ್ಹೇಗೆ ೧೨ ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಎಂದು ಅಶೋಕ್ ಪ್ರಶ್ನಿಸಿದರು.

ಹೊಸದಾಗಿ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಸಚಿವರು ಹೇಳುತ್ತಾರೆ. ಬಿಪಿಎಲ್ ಕಾರ್ಡ್ ರದ್ದು ಮಾಡುವಾಗ ಅರ್ಜಿ ಕೊಟ್ಟಿದ್ದೀರಾ ನೋಟಿಸ್ ಕೊಟ್ಟಿದ್ದೀರಾ? ನೀವು ಮಾಡಿರುವ ತಪ್ಪಿಗೆ ಬಡವರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅಶೋಕ್ ಕಿಡಿಕಾರಿದರು. ಅಲ್ಲದೆ, ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಂದ ಲಂಚ ಪಡೆಯಲು ಇದು ಪಿತೂರಿ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು

RELATED ARTICLES
- Advertisment -
Google search engine

Most Popular