ರಾಮನಗರ:
ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಲಯನ್ ಸಂಸ್ಥೆ (ರಿ) ರಾಮನಗರ ಇವರ ಸಂಯುಕ್ತಾಶ್ರಯದಲ್ಲಿ ಇಂದು ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಕೌಶಲ್ಯದ ಅವಶ್ಯಕತೆ, ಸ್ಕಿಲ್ ಕನೆಕ್ಟ್ ವೈಶಿಷ್ಟತೆ ಮತ್ತು ಸರ್ಕಾರದ ಕೌಶಲ್ಯಾಧಾರಿತ ಯೋಜನೆಗಳ ಮಹತ್ವದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಉಮೇಶ್ ಅವರು ಮಾತನಾಡಿ, ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ವಿವರಿಸಿ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಪ್ರೇರೆಪಣೆ ಮೂಲಕ ತಿಳಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಸತಾರ್, ಲಯನ್ ಸಂಸ್ಥೆಯ ಕಾರ್ಯದರ್ಶಿಗಳಾದ ಲೋಕೇಶ್, ಲಯನ್ ಸಂಸ್ಥೆಯ ನಿರ್ದೇಶಕರಾದ ಲಾವಣ್ಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶೈಲಜ ಹಾಗೂ ಇತರರು ಉಪಸ್ಥಿತರಿದ್ದರು.