Sunday, April 20, 2025
Google search engine

Homeಅಪರಾಧಕಾನೂನುಬಿಎಸ್ ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂ ಪಕ್ಷಪಾತ ಮಾಡ್ತಿದೆ: ಮಧ್ಯಪ್ರವೇಶಿಸುವಂತೆ ಸಿಜೆಐಗೆ ಪತ್ರ

ಬಿಎಸ್ ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂ ಪಕ್ಷಪಾತ ಮಾಡ್ತಿದೆ: ಮಧ್ಯಪ್ರವೇಶಿಸುವಂತೆ ಸಿಜೆಐಗೆ ಪತ್ರ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಮನವಿ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ೨೦೧೭ರಿಂದ ಬಾಕಿ ಉಳಿದಿರುವ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡಿದೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ವಕೀಲ ಸಚಿನ್ ಪತ್ರ ಬರೆದಿದ್ದಾರೆ. ಸಚಿನ್ ದೇಶಪಾಂಡೆ ಅವರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್ ೧೯ಕ್ಕೆ ವಿರುದ್ಧವಾಗಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಚರ್ಚೆ ಮಾಡದೇ ಬಿಎಸ್ ಯಡಿಯೂರಪ್ಪ ಅವರು ಕೋರಿದ ತಕ್ಷಣ ಬಹುತೇಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪಿಸಿ ಕಾಯ್ದೆಯಡಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ ಹಾಗೂ ಭ್ರಚಾರ ನಿಗ್ರಹ ದಳ ಸುಪ್ರೀಂ ಕೋರ್ಟನಲ್ಲಿ ಪ್ರಶ್ನಿಸಿದಾಗ ಸುಪ್ರೀಂ ಕೋರ್ಟ್ ಯಾವುದೇ ವಿವರಣೆ ನೀಡಿದೆ ತಡೆ ನೀಡಿದೆ. ಇದು ಬಿಎಸ್ ಯಡಿಯೂರಪ್ಪ ಪರವಾಗಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ನಡೆದುಕೊಂಡಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular