Sunday, April 20, 2025
Google search engine

Homeಅಪರಾಧಕಾನೂನುಸಂಸದ ಕೋಟ ಶ್ರೀನಿವಾಸ್ ಗೆ ಬಿಗ್ ರಿಲೀಫ್ : ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದುಗೊಳಿಸಿದ...

ಸಂಸದ ಕೋಟ ಶ್ರೀನಿವಾಸ್ ಗೆ ಬಿಗ್ ರಿಲೀಫ್ : ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಹೌದು ಕಳೆದ ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.

ತಮ್ಮ ವಿರುದ್ಧ ಚುನಾವಣಾ ಸಂಚಾರ ಜಾಗೃತ ದಳದ ಅಧಿಕಾರಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ ದೂರನ್ನು ರದ್ದುಪಡಿಸುವಂತೆ ಕೋರಿ ಸಂಸದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿ ದಾರರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಈ ಅಧಿಕಾರ ವ್ಯಾಪಿಜಾಗೃತದಳ ಹೊಂದಿಲ್ಲ. ಆದ್ದರಿಂದ ಈ ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿದರು. ಈ ವಾದ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ದೂರನ್ನು ರದ್ದುಪಡಿಸಿತು.

RELATED ARTICLES
- Advertisment -
Google search engine

Most Popular