ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಸ್ವೀಕಾರ ಮಾಡ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್‌ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವಂತಹ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್ ಪಕ್ಷದವರು ವಿಪರೀತ ಹಣದ ಹೊಳೆಯನ್ನು ಎರಡು ದಿನ ಹರಿಸಿ ಇಂದು ಗೆಲುವು ಸಾಧಿಸಿದ್ದಾರೆ ಎಂದರು.
ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಶಾಸಕರು ಜನ ಆಯ್ಕೆ ಮಾಡಿದ್ದಾರೆ. ನಾವು ಶಿಗ್ಗಾಂವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಆ ಅಭಿವೃದ್ಧಿ ಪರ್ವ ಹಾಗೆ ಮುಂದುವರೆಯಲಿ ಎಂದು ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ ಎಂದು ಬಯಸುತ್ತೇನೆ. ೧೦ ಜನ ಸಚಿವರು, ೪೦ಕ್ಕಿಂತ ಹೆಚ್ಚು ಶಾಸಕರು ಬಂದಿದ್ದರು. ಸರ್ಕಾರದ ಯಂತ್ರ, ಹಣದಿಂದ ಅವರು ಗೆದ್ದಿದ್ದಾರೆ ಎಂದರು. ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆ ಮುನ್ನಡೆಯಲ್ಲಿ ಗೆಲ್ಲುತ್ತಾ ಇದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ಹಾಗೂ ಮೂರು ಪಕ್ಷದ ಒಗ್ಗಟ್ಟಿನಿಂದ ಕಳೆದ ಮೂರು ವರ್ಷದ ಸರ್ಕಾರದ ಅಭಿವೃದ್ಧಿ ಮೇಲೆ ಜಯ ಸಿಕ್ಕಿದೆ ಎಂದರು .