ಮೈಸೂರು : ಐತಿಹಾಸಿಕ ನಗರಿ ಮೈಸೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯದ ೬ನೇ ರಾಜ್ಯ ಪ್ರತಿನಿಧಿ ಸಭೆಯು ನ.೨೫ ರಿಂದ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮಾಹಿತಿ ನೀಡಿದ್ದಾರೆ.
ನಗರದ ರಿಂಗ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಹಿಂಭಾಗದಲ್ಲಿರುವ ವೈಟ್ ಪ್ಯಾಲೆಸ್ ಸಭಾಂಗಣದಲ್ಲಿ ನ.೨೫ ಮತ್ತು ೨೬ ರಂದು ಎರಡು ದಿನಗಳ ಕಾಲ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.