Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 750 ಭೂಮಾಪಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕೆಳಕಂಡ ಹುದ್ದೆಗಳಿಗೆ ಸಂಬಂಧ ಪಟ್ಟ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

  • ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ
  • ಹುದ್ದೆಗಳ ಹೆಸರು : ಲ್ಯಾಂಡ್ ಸರ್ವೇಯರ್ (ಹೆಚ್ ಕೆ ) – 190 ಹಾಗೂ ಲ್ಯಾಂಡ್ ಸರ್ವೇಯರ್ (ಆರ್ ಪಿಸಿ ) – 560
  • ಒಟ್ಟು ಹುದ್ದೆಗಳು : 750
  • ಉದ್ಯೋಗ ಸ್ಥಳ : ಕರ್ನಾಟಕ

ವಿದ್ಯಾರ್ಹತೆ

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಐಟಿಐ, ಪಿಯುಸಿ, ಡಿಪ್ಲೊಮಾ, ಬಿಇ ಅಥವಾ ಬಿ. ಟೆಕ್ ಸಿವಿಲ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಮೀರಿರಬಾರದು. ಅದಲ್ಲದೇ, ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ವರ್ಷ, ಎಸ್ ಸಿ /ಎಸ್ ಟಿ /ಪ್ರವರ್ಗ-1 ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಅಂಗವಿಕಲ /ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

  • ಎಸ್ ಸಿ / ಎಸ್ ಟಿ /ಪ್ರವರ್ಗ-I/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
  • ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
  • ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
  • ಸಾಮಾನ್ಯ ಅಭ್ಯರ್ಥಿಗಳು: ರೂ.600/-
    ಆಯ್ಕೆ ವಿಧಾನ
  • ಕನ್ನಡ ಭಾಷಾ ಪರೀಕ್ಷೆ
  • ಸ್ಪರ್ಧಾತ್ಮಕ ಪರೀಕ್ಷೆ

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25-ನವೆಂಬರ್-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-ಡಿಸೆಂಬರ್-2024
RELATED ARTICLES
- Advertisment -
Google search engine

Most Popular