Saturday, April 19, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೇಸ್ ಕೈಹಿಡಿದ ಮತದಾರರು: ಈಶ್ವರ್.ಬಿ. ಖಂಡ್ರೆ

ಕೆ.ಆರ್.ನಗರ: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೇಸ್ ಕೈಹಿಡಿದ ಮತದಾರರು: ಈಶ್ವರ್.ಬಿ. ಖಂಡ್ರೆ

ಕೆ.ಆರ್.ನಗರ: ರಾಜ್ಯದಲ್ಲಿ ನಡೆದ ಮೂರು ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯ ಗೆಲುವು ಪಂಚ ಗ್ಯಾರಂಟಿಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಸಂದ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಕೆ.ಆರ್.ನಗರದಲ್ಲಿ ಸೋಮವಾರ ನಡೆದ ಮಲೆ ಮಹದೇಶ್ವರ ಸ್ವಾಮಿಯ ೫೪ನೇ ಉತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಜನಪರವಾಗಿ ಕಾರ್ಯ ನಿರ್ವಹಿಸಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದು ಇದನ್ನು ಸಹಿಸಲಾರದೆ ಪ್ರತಿಪಕ್ಷಗಳು ಇಲ್ಲ ಸಲ್ಲದ ಅಪ ಪ್ರಚಾರ ಮಾಡಿ ಸುಳ್ಳು ಆರೋಪ ಹೊರಿಸಿ ಅಬ್ಬರದ ಪ್ರಚಾರ ಮಾಡಿದರೂ ನಾಡಿನ ಜನರು ಜೆಡಿಎಸ್, ಬಿಜೆಪಿ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದರು.

ಪ್ರಜಾ ಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳನ್ನು ಅಭದ್ರಗೊಳಿಸುವ ಸಂಚನ್ನು ಬಿಜೆಪಿ ಸರ್ಕಾರ ಮಾಡುತ್ತಿದ್ದು, ರಾಜ್ಯದಲ್ಲಿ ೧೩೬ ಕ್ಷೇತ್ರಗಳಲ್ಲಿ ಪ್ರಚಂಡ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸಲು ಪಕ್ಷದ ನಾಯಕರ ಮೇಲೆ ಅನಗತ್ಯ ಕೇಸುಗಳನ್ನು ದಾಖಲು ಮಾಡಿಸುತ್ತಾ ರಾಜ್ಯದ ಜನತೆಯ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಆದರೆ ಜನರು ಉಪ ಚುನಾವಣಾ ಫಲಿತಾಂಶದ ಮೂಲಕ ತಕ್ಕ ಉತ್ತರ
ನೀಡಿದ್ದಾರೆ ಎಂದರು.

ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ವಿಚಾರಕ್ಕೂ ಮುಖ್ಯಮಂತ್ರಿಗಳಿಗೂ ಯಾವುದೇ ಸಂಬoಧವಿಲ್ಲ ಆದರೆ ಬಿಜೆಪಿಗರು ಅನಗತ್ಯವಾಗಿ ಅವರ ಹೆಸರನ್ನು ಎಳೆದು ತಂದಿದ್ದು ಇದನ್ನು ಜನತೆ ಕ್ಷಮಿಸುವುದಿಲ್ಲ ಎಂದ ಸಚಿವರು ಉಪ ಚುನಾವಣೆ ಫಲಿತಾಂಶ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ಜನರ ಬೆಂಬಲವನ್ನು ಅರಿತು ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳು ರಾಜ್ಯದ ಅಭಿವೃದ್ದಿ ಮಾಡಲು ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

ಕಳೆದ ಐದು ವರ್ಷಗಳಿಂದ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯದಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಇದಕ್ಕುತ್ತರಿಸಿದ ಅವರು ಅವುಗಳು ಆಯೋಗದ ನಿಯಮ ಮತ್ತು ನ್ಯಾಯಾಲಯದ ಸೂಚನೆಯಂತೆ ಸಕಾಲದಲ್ಲಿ ನಡೆಯುತ್ತವೆ ಎಂದರು. ಪ್ರಿಯಾಂಕಾ ಗಾಂಧಿ ಅವರು, ೪ ಲಕ್ಷಕ್ಕೂ ಅಧಿಕ ಮತಗಳ ಅಂತರದಿoದ ಜಯ ಸಾಧಿಸಿದ್ದು ನಮ್ಮ ಪಕ್ಷದ ಸರ್ವೋನ್ನತ ನಾಯಕರಾಗಿರುವ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಈಶ್ವರ ಖಂಡ್ರೆ ನುಡಿದರು.

” ಸಚಿವರಿಗೆ ಅದ್ದೂರಿ ಸ್ವಾಗತ”

ಪಟ್ಟಣದಲ್ಲಿ ನಡೆದ ಮಲೆ ಮಹದೇಶ್ವರ ಸ್ವಾಮಿ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅರಣ್ಯ ಸಚಿವ ಈಶ್ವರ.ಬಿ.ಖಂಡ್ರೆ ಅವರನ್ನು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಇಲ್ಲಿನ ತೋಪಮ್ಮನ ದೇವಾಲಯದ ಬಳಿ ಶಾಸಕ ಡಿ.ರವಿಶಂಕರ್ ನೇತೃತ್ವದಲ್ಲಿ ಸಚಿವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಸಚಿವರು ಆಗಮಿಸಿದಾಗ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ
ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು ಇದಕ್ಕೆ ತಮ್ಮ ಪೂರ್ಣ ಬೆಂಬಲ ನೀಡಿರುವ ಜನರು ಉಪಚುನಾವಣೆಯಲ್ಲಿ ಮತ್ತೆ ಸಾಬೀತು ಪಡಿಸಿದ್ದಾರೆ ಎಂದರು.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸದಾ ಕ್ರಿಯಾಶೀಲರಾಗಿ ಸಂಘಟನೆ ಮಾಡುವುದರ ಜತೆಗೆ ಸರ್ಕಾರದ ಸವಲತ್ತುಗಳು ಅರ್ಹರ ಮನೆ ಬಾಗಿಲಿಗೆ ತಲುಪುವಂತೆ ನಿಗಾವಹಿಸಬೇಕು ಎಂದು ಸಲಹೆ ನೀಡಿದ
ಅವರು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕು ಎಂದರು.

ಪಕ್ಷದ ಮುಖಂಡರಿoದ ಸ್ವಾಗತ ಸ್ವೀಕರಿಸಿದ ಸಚಿವರು ಎಲ್ಲರೊಂದಿಗೆ ಆತ್ಮೀಯವಾಗಿ ಮಾತನಾಡಿ ಪರಿಚಯ ಮಾಡಿಕೊಂಡಿದ್ದು ಕಾಂಗ್ರೆಸ್ ನಾಯಕರಿಗೆ ಸಂತಸ ಉಂಟು ಮಾಡಿತಲ್ಲದೆ ಸಚಿವರ ಸರಳತೆ ಎಲ್ಲರ ಮನಗೆದ್ದಿತು.

ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯರಾದ ದೊಡ್ಡಸ್ವಾಮೇಗೌಡ, ಸಿ.ಪಿ.ರಮೇಶ್‌ಕುಮಾರ್, ತಾ.ಪಂ. ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ಜಿ.ಪಂ. ಮಾಜಿ ಸದಸ್ಯ ಜಯರಾಮೇಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ನಿರ್ದೇಶಕ ಕೆ.ಎನ್.ಪ್ರಸನ್ನಕುಮಾರ್, ಮಾಜಿ ಅಧ್ಯಕ್ಷ ವೈ.ಎಸ್.ಕುಮಾರ್, ಬ್ಲಾಕ್ ಕಾಂಗ್ರೆಸ್
ಅಧ್ಯಕ್ಷರುಗಳಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್‌ಜಾಬೀರ್, ಪುರಸಭೆ ಸದಸ್ಯರಾದ ಶಿವುನಾಯಕ್, ಶಂಕರ್, ನಟರಾಜು, ಭೂ ನ್ಯಾಯ ಮಂಡಳಿ ಸದಸ್ಯ ಎಲ್.ಪಿ.ರವಿಕುಮಾರ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಹೆಚ್.ಹೆಚ್.ನಾಗೇಂದ್ರ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚೀರ‍್ನಹಳ್ಳಿಶಿವಣ್ಣ, ಖಜಾಂಚಿ ಬಿ.ಎಂ.ಗಿರೀಶ್, ಜಿಲ್ಲಾ ನಿರ್ದೇಶಕ ಡಿ.ಜೆ.ಬಸವರಾಜು, ಗ್ರಾ.ಪಂ. ಸದಸ್ಯರಾದ ಕೆ.ಪಿ.ಜಗದೀಶ್, ಚೌಕಹಳ್ಳಿಶೇಖರ್ ಇದ್ದರು.

RELATED ARTICLES
- Advertisment -
Google search engine

Most Popular