ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಇರುವ ಚಾರ್ಮಾಡಿ ಘಾಟ್ ನಲ್ಲಿ ದಟ್ಟ ಮಂಜು ಆವರಿಸಿದ್ದು, ವಾಹನ ಸವಾರರು ಪರದಾಟುವಂತಾಗಿದೆ.
ದಟ್ಟವಾಗಿ ಆವರಿಸಿರುವ ಮಂಜಿನಿಂದ ವಾಹನ ಚಾಲನೆ ಮಾಡಲು ಸವಾರರ ಸಮಸ್ಯೆ ಅನುಭವಿಸುತ್ತಿದ್ದಾರೆ. ಕಿರಿದಾದ ಸಾವಿರಾರು ಅಡಿ ಪ್ರಪಾತದ ರಸ್ತೆಯಲ್ಲಿ ವಾಹನ ಚಾಲನೆಗೆ ದಟ್ಟ ಮಂಜು ಮತ್ತು ಮಳೆಯಿಂದ ಸಮಸ್ಯೆ ಉಂಟಾಗಿದೆ.
ವಾಹನಗಳ ಹೆಡ್ ಲೈಟ್ ಹಾಕಿಕೊಂಡು ಚಾಲಕರು ಚಾಲನೆ ಮಾಡುತ್ತಿದ್ದಾರೆ. ಮತ್ತೆ ಕೆಲವರು ಮಂಜಿಗೆ ಮೈವೊಡ್ಡಿ ಸಂಭ್ರಮಿಸುತ್ತಿದ್ದಾರೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಘಾಟ್ ಇದಾಗಿದೆ.
