Sunday, April 20, 2025
Google search engine

Homeರಾಜ್ಯಪೋಡಿ ದುರಸ್ಥಿ ಸರಳೀಕೃತ ಕಾರ್ಯಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ

ಪೋಡಿ ದುರಸ್ಥಿ ಸರಳೀಕೃತ ಕಾರ್ಯಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕು ಬಾಗೀವಾಳು ಗ್ರಾಮದಲ್ಲಿ ಪೋಡಿ ದುರಸ್ಥಿ ಸರಳೀಕೃತ ಕಾರ್ಯಕ್ಕೆ ಇಂದು ರೈತರ ಹೊಲದಲ್ಲೇ ಅಧೀಕೃತವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ.

ಕಳೆದ ಒಂದು ವರ್ಷಗಳಿಂದ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸತತ ಸಭೆ ನಡೆಸಿ, ಚರ್ಚಿಸಿ ಕೊನೆಗೂ ನಮೂನೆ 1 ರಿಂದ 5 ಪೋಡಿ ದುರಸ್ಥಿ ಕೆಲಸವನ್ನು ಸರಳೀಕರಣಗೊಳಿಸಿ ಇದೀಗ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆನ್ಲೈನ್ನಲ್ಲಿ ಡಿಜಿಟಲ್ ಪ್ರಕ್ರಿಯೆಗಾಗಿ ಆಪ್ ರೂಪಿಸಲಾಗಿದೆ. 1,96,000 ಸರ್ಕಾರಿ ಸರ್ವೇ ನಂಬರ್ಗಳನ್ನೂ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿ. ಮೊದಲ ಹಂತದಲ್ಲಿ ಈಗಾಗಲೇ 27,107 ಫೈಲ್ ಸೃಷ್ಟಿಸಲಾಗಿದೆ.

ಇದರ ಜೊತೆ ಜೊತೆಗೆ ನಮೂನೆ 6 ರಿಂದ 10 ರ ಸರ್ವೇ ಕೆಲಸಕ್ಕೆ ಇಂದು ಹಾಸನದಲ್ಲಿ ವಿದ್ಯುಕ್ತ ಚಾಲನೆ ನೀಡಲಾಗಿದೆ. ಈ ಸಮಾರಂಭದಲ್ಲಿ 200 ಜನಕ್ಕೆ ಪೋಡಿ ದುರಸ್ಥಿ ಮಾಡಿ ಹೊಸ ಸರ್ವೇ ನಂಬರ್ ನೀಡಲಾಗುತ್ತಿದೆ. ಇಂದಿನ ಪೋಡಿ ದುರಸ್ಥಿ ಅಭಿಯಾನ ಪೇಪರ್ನಿಂದ ಮಾತ್ರವಲ್ಲ ಫೀಲ್ಡಿನಿಂದಲೂ ಆರಂಭವಾಗಲಿದ್ದು, ಈ ಕೆಲಸ ಸಂಪೂರ್ಣವಾಗಿ ಮುಗಿದರೆ ಕನಿಷ್ಟ 20 ರಿಂದ 25 ಲಕ್ಷ ರೈತ ಕುಟುಂಬಗಳ ಹಲವು ದಶಕಗಳ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular