ಬೆಂಗಳೂರು : ಇದೆ ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿದ್ದು, ಈ ಒಂದು ವಿಚಾರವಾಗಿ ಡಿಡಿಸಿಎಂ ಸೆಂಬ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಾಸನ ಸಮಾವೇಶಕ್ಕೆ ಯಾವುದೇ ಗೊಂದಲವಿಲ್ಲ. ಪಕ್ಷದ ವೇದಿಕೆಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ನನ್ನ ನೇತೃತ್ವದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜಿಲ್ಲಾ ಮಂತ್ರಿಗಳು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲೆಕ್ಷನ್ ಮುಗಿದ ಮಾತ್ರಕ್ಕೆ ಮರಿಯೋದು ಅಲ್ಲ. ಮುಂಬರುವ ಚುನಾವಣೆಯ ಬಗ್ಗೆಯೂ ಯೋಚನೆ ಮಾಡಬೇಕು. ಹೀಗಾಗಿ ಡಿಸೆಂಬರ್ 5ರಂದು ಹಾಸನದಲ್ಲಿ ಸಮಾವೇಶ ಮಾಡಲಿದ್ದೇವೆ. ಯಾರು ನಮಗೆ ಬೆಂಬಲ ಕೊಡುತ್ತಾರೋ ಅವರಿಗೆ ಬೆಂಬಲ ಕೊಡುತ್ತೇವೆ. ಹಾಸನ ಮೈಸೂರು ಚಾಮರಾಜನಗರ ಉಸ್ತುವಾರಿ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದು ಎಲ್ಲರೂ ಸಹ ಈ ಸಮಾವೇಶಕ್ಕೆ ಬಂದು ಯಶಸ್ವಿ ಮಾಡಬೇಕು ಎಂದು ತಿಳಿಸಿದರು.
ಪಕ್ಷ ಸಂಘಟನೆ ಮಾಡುವಾಗ ದೃಷ್ಟಿಯಿಂದ ಸಮಾವೇಶ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶಕ್ಕೆ ತೀರ್ಮಾನ ಮಾಡಿದ್ದೇವೆ ಎಲ್ಲೆಲ್ಲಿ ಕಳೆದುಕೊಂಡಿದ್ದೆವು, ಅಲ್ಲೇ ಹುಡುಕಬೇಕು ಎಂಬುವುದು ನಮ್ಮ ಆಸೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಕೂಡ ಸದ್ಯದಲ್ಲೇ ಬರಲಿದೆ. ಶಿಗ್ಗಾವಿ ಸಂಡೂರು ಕ್ಷೇತ್ರದಲ್ಲಿ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತೇ. ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ತೀರ್ಮಾನ ಮಾಡಿದ್ದಾರೆ. ದೇಶದಲ್ಲಿ ಆಗುತ್ತಿರುವ ವಿಷಯಗಳ ಮೇಲೆ ಸಮಾವೇಶ ಮಾಡುತ್ತೇವೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಆ ವಾಹನ ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಯಾವುದೇ ಗೊಂದಲವಿಲ್ಲದೆ ಪಕ್ಷದ ವೇದಿಕೆಯಲ್ಲಿ ಸಮಾವೇಶ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಅಲ್ಲ. ಕೆಲವರು ವೈಯಕ್ತಿಕವಾಗಿ ಮಾತಾಡಬಹುದು ಒಂದೇ ಪಕ್ಷ ಒಂದೇ ಚಿಹ್ನೆ ಇರಲಿದೆ. ಸಮಾವೇಶದ ಬಗ್ಗೆ ಎಐಸಿಸಿ ನಾಯಕರ ಜೊತೆಗೂ ಸಹ ಮಾತನಾಡಿದ್ದೇವೆ. ಜನರ ಹಿತಕ್ಕಾಗಿ ಈ ಒಂದು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡಿದ್ದಕ್ಕೆ ಜನರು ಉತ್ತರ ಕೊಟ್ಟಿದ್ದಾರೆ. ನನ್ನ ನೇತೃತ್ವದಲ್ಲಿ ಹಾಸನ ಸಮಾವೇಶ ಮಾಡುತ್ತಿದ್ದೇನೆ. ಎಲ್ಲಾ ಜಿಲ್ಲೆಗಳಲ್ಲೂ ಇದೇ ರೀತಿಯ ಕಾರ್ಯಕ್ರಮ ಮಾಡಲಿದ್ದೇನೆ. ಇದಕ್ಕೆ ಎಐಸಿಸಿ ನಾಯಕರು ಸೂಚನೆ ಕೊಟ್ಟಿದ್ದಾರೆ. ಕಾಂಗ್ರೆಸ್ ಯಾವಾಗಲೂ ಒಂದೇ ಪಾರ್ಟಿ. ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಮಾತನಾಡಿದ್ದೇನೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.