ಬೆಂಗಳೂರು: ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರಕಾರ ಯಾಕೆ ಕೇಸು ಹಾಕಿಲ್ಲ ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ ಕಾನೂನು ಬೇರೆ ಬೇರೆ ಇದೆಯೇ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಪ್ರಶ್ನಿಸಿದರು.
ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸ್ವಾಮೀಜಿಯವರಿಗೆ 80 ವರ್ಷವಾಗಿದ್ದು, ಅನಾರೋಗ್ಯದಿಂದಿದ್ದಾರೆ. ಬಹಳ ನೊಂದಿದ್ದಾರೆ. ದೇಶದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು ಎಂದು ತಿಳಿಸಿದರು. ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದರು.