Sunday, April 20, 2025
Google search engine

Homeರಾಜ್ಯಸುದ್ದಿಜಾಲದತ್ತು ಮತ್ತು ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಜಿಲ್ಲೆಗೆ ಪ್ರಥಮ ಸ್ಥಾನ

ದತ್ತು ಮತ್ತು ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಜಿಲ್ಲೆಗೆ ಪ್ರಥಮ ಸ್ಥಾನ


ಶಿವಮೊಗ್ಗ: ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಕಾರ್ಯಕ್ರಮ ಕುರಿತು ಹಮ್ಮಿಕೊಳ್ಳಲಾಗಿದ್ದ ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಾಗೂ ದತ್ತು ಮತ್ತು ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನವನ್ನು ಪರಿಗಣಿಸಿ ಜಿಲ್ಲೆಗೆ ಪ್ರಥಮ ಸ್ಥಾನ ನೀಡಿ ಗೌರವಿಸಲಾಗಿದೆ.


ಭಾರತ ಸರ್ಕಾರ, ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ, ಕರ್ನಾಟಕ ಸರ್ಕಾರ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರ ವತಿಂದ ಮಿಷನ್ ವಾತ್ಸಲ್ಯ ಯೋಜನೆ ಯ ದತ್ತು ಕಾರ್ಯಕ್ರಮ ಮತ್ತು ಪೋಷಕ್ವ ಯೋಜನೆಯ ಕುರಿತು ಸಾರ್ವಜನಿಕರಿಗೆ, ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳಿಗೆ ಕಾನೂನು ಬದ್ದ ದತ್ತು ಮತ್ತು ಪೋಷಕತ್ವ ಯೋಜನೆಯ ಮೂಲಕ ದತ್ತು ಹೋಗುವಂತಹ ಮಗುವಿಗೆ ಶಾಶ್ವತ ಕುಟುಂಬದ ಅಗತ್ಯವಿರುವ ಮಕ್ಕಳಿಗೆ ಶಾಶ್ವತ, ಸ್ಥಿರ ಮತ್ತು ಕಾಳಜಿಯುಳ್ಳ ವಾತಾವರಣವನ್ನು ಅನುಕೂಲವಾಗುವಂತೆ ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರನೆಯನ್ನು ಆಚರಿಸಲಾಗುತ್ತಿದೆ.

ಅದರಂತೆ ನವೆಂಬರ್-2024 ನ್ನು ‘ಪೋಷಕತ್ವ ಕಾರ್ಯಕ್ರಮದಡಿ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದನ್ನು ಉತ್ತೇಜಿಸಲು ಮೀಸಲಾದ ವಿಶೇಷ ದಿನವಾಗಿದೆ, ಸಂದರ್ಭವಾಗಿದೆ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಕಾರ್ಯಕ್ರಮದ ಕುರಿತು ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಜಾಥಾ ಕಾರ್ಯಕ್ರಮ, ಮೈಕ್ ಮೂಲಕ ಪ್ರಚಾರ, ಆಕಾಶವಾಣಿ ಕಾರ್ಯಕ್ರಮ, ಟಿವಿ ಸಂದರ್ಶನ, ದಿನಪತ್ರಿಕೆಗಳಲ್ಲಿ ಜಾಗೃತಿ ಲೇಖನಗಳು, ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಂದ ಸಂಕಲ್ಪ ಸಂದೇಶ, ಜೀವಸೆಲೆ ವಿಡಿಯೋ ವೀಕ್ಷಣೆ ಮತ್ತು ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು ಪರಿಗಣಿಸಿ ಹಾಗೂ ದತ್ತು ಮತ್ತು ಪೋಷಕತ್ವ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿರುವುದಕ್ಕಾಗಿ ರಾಜ್ಯ ಮಟ್ಟದಲ್ಲಿ ಜರುಗಿದ ರಾಷ್ಟಿçÃಯ ದತ್ತು ಮಾಸಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರು ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ ನೀಡಿ ಗೌರವಿಸಿದೆ.

2023-24 ನೇ ಸಾಲಿನಲ್ಲಿಯೂ ಪ್ರಥಮ ಬಹುಮಾನವನ್ನು ಜಿಲ್ಲೆ ಪಡೆದಿತ್ತು ಎಂತು ಜಿಲ್ಲಾ ಮಕ್ಕಳ ರಕ್ಷಣಾದಿಕಾರಿ ಮಂಜುನಾಥ್ ಆರ್ ಇವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular