ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್‌ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೇ ನೀಡಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ನೂತನ ಮರಳು ನೀತಿ ಜಾರಿಗೆ ತರುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದರಂತೆ ಸಾರ್ವಜನಿಕ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅತ್ಯಂತ ಕಡಿಮೆ ದರದಲ್ಲಿ ಮರಳನ್ನು ಪೂರೈಕೆ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಖಾಸಗಿ ಬಳಕೆಗೆ ಮರಳನ್ನು ಕಡಿಮೆ ಬೆಲೆಗೆ ಪೂರೈಸಲು ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.
ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಹಳ್ಳಗಳಿಂದ ಮರಳನ್ನು ತೆಗೆದು ವಿಲೇವಾರಿ ಮಾಡುವ ಹೊಣೆಗಾರಿಕೆಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ. ಸಾರ್ವಜನಿಕ ಕಾಮಗಾರಿಗಳಿಗೆ ಪ್ರತಿ ಟನ್‌ಗೆ ೩೦೦ ರೂ. ರಂತೆ ಮರಳು ಪೂರೈಕೆ ಮಾಡಲಾಗುತ್ತಿದೆ’ ಎಂದರು.
ಈಗ ನಾಲ್ಕು ಮತ್ತು ಐದನೇ ಶ್ರೇಣಿ ಹಾಗೂ ಅದಕ್ಕಿಂತ ಉನ್ನತ ಶ್ರೇಣಿಯ ಹಳ್ಳಗಳು ಹಾಗೂ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ಬ್ಲಾಕ್‌ಗಳನ್ನು ವಿಲೇವಾರಿ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಮರಳು ಸಮಿತಿಗಳಿಗೆ ನೀಡಲು ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಇಲಾಖೆಗಳು ಮರಳು ಗಣಿಗಾರಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ವ್ಯಕ್ತಿ ಮತ್ತು ಸಂಸ್ಥೆಗಳು ಟೆಂಡರ್ ಮೂಲಕ ಬ್ಲಾಕ್‌ಗಳನ್ನು ಪಡೆಯಬಹುದಾಗಿದೆ’ ಎಂದು ವಿವರಿಸಿದರು.
ಸಾರ್ವಜನಿಕರಿಗೆ ಪೂರೈಸಲು ಪ್ರತಿ ಟನ್‌ಗೆ ರೂ. ೮೫೦ ದರ ನಿಗದಿ ಬ್ಲಾಕ್ ಹಂಚಿಕೆಯಲ್ಲಿ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಇತರೆ ಹಿಂದುಳಿದ ಜಾತಿಗಳಿಗೂ ಮೀಸಲಾತಿ ಅನ್ವಯ ಎಂದು ತಿಳಿಸಿದರು.