Sunday, April 20, 2025
Google search engine

Homeರಾಜ್ಯಸುದ್ದಿಜಾಲಯಗಟಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಕುಳಿತು ಹೋಳಿಗೆ ಊಟ ಸವಿದ ವೈ. ಎಸ್. ವಿ.ದತ್ತ

ಯಗಟಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಕುಳಿತು ಹೋಳಿಗೆ ಊಟ ಸವಿದ ವೈ. ಎಸ್. ವಿ.ದತ್ತ

ಚಿಕ್ಕಮಗಳೂರು, ಜುಲೈ, 18: ಅಸತೋಮ ಸದ್ಗಮಯ ಪ್ರಾರ್ಥನೆ ಮಾಡಿ ಕಡೂರು ಮಾಜಿ ಶಾಸಕ ವೈ.ಎಸ್.ವಿ ದತ್ತ ಅವರು ಸ್ವಗ್ರಾಮ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆ ಸರದಿ ಸಾಲಿನಲ್ಲಿ ಕುಳಿತು ಹೋಳಿಗೆ ಊಟ ಮಾಡಿ ಗಮನ ಸೆಳೆದಿದ್ದಾರೆ. ಹಾಗೆಯೇ ಅದೇ ಶಾಲೆಯಲ್ಲಿ ಓದಿ ಬೆಳೆದ ದತ್ತ ಅವರ ಸಹೋದರಿ ವೈ.ಎಸ್.ವಿಜಯಲಕ್ಷ್ಮಿಯವರ ಸ್ಮರಣಾರ್ಥ ಮಕ್ಕಳಿಗೆ ಬಸವಣ್ಣ, ಡಿವಿಜಿ ಹಾಗೂ ಅಂಬೇಡ್ಕರ್ ಅವರ ಪುಸ್ತಕಗಳ ಜೊತೆ ಓದಿನ ಸಾಮಾಗ್ರಿಗಳನ್ನು ನೀಡಿದ್ದಾರೆ.

ಅಲ್ಲದೆ ನಂತರ ಮಾತಾನಾಡಿದ ಅವರು, ಮನುಷ್ಯ ಎಷ್ಟೇ ಅತ್ಯುನ್ನತ ಸ್ಥಾನಕ್ಕೆ ಹೋದರೂ ತಮಗೆ ಪ್ರಾಥಮಿಕ ಶಿಕ್ಷಣ ನೀಡಿದ ಶಾಲೆಯೊಡನೆ ಸದಾ ಸಂಪರ್ಕವಿಟ್ಟುಕೊಂಡು ಆ ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದರು. ಹಾಗೆಯೇ 153 ವರ್ಷಗಳ ಹಿಂದಿನ ಈ ಶಾಲೆ ರಾಜ್ಯವ್ಯಾಪಿ ದೊಡ್ಡ ಕೊಡುಗೆ ನೀಡಿದೆ.‌ ಇಲ್ಲಿ ವ್ಯಾಸಂಗ ಪಡೆದ ಅನೇಕರು ಅತ್ಯುನ್ನತ ಹುದ್ದೆಗೇರಿದ್ದಾರೆ. ಅವರಲ್ಲಿ ವಿಜಯಲಕ್ಷ್ಮಿ ಕೂಡ ಒಬ್ಬರು. ಅವರು ಸಾಂಸ್ಕೃತಿಕ ಹಾಗೂ ಸಾಹಿತಿಕವಾಗಿ ಬಹು ದೊಡ್ಡ ಜ್ಞಾನ ಹೊಂದಿದ್ದರು.‌

ರಾಮಕೃಷ್ಣ ಹೆಗ್ಗಡೆಯವರು ಸಿಎಂ ಆಗಿದ್ದಾಗ ರೂಪಿಸಿದ ಹಲವು ಯೋಜನೆಗಳಿಗೆ ವಿಜಯಲಕ್ಷ್ಮಿ ಅವರ ಹೆಸರು ಸೂಚಿಸುತ್ತಿದ್ದರು. ಅಂತಹ ದೊಡ್ಡ ಜ್ಞಾನ ಸಂಪಾದಿಸಿದ್ದ ವಿಜಯಲಕ್ಷ್ಮಿ ಶಿಕ್ಷಣ ಪ್ರೇಮಿಯಾಗಿದ್ದರು ಎಂದರು. ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬುದು ಅವರ‌ ಆಶಯ. 60 ವರ್ಷಗಳ ಹಿಂದೆ ನಾನೂ ಕೂಡ ಈ ಶಾಲೆಯ ವಿದ್ಯಾರ್ಥಿಯಾಗಿದ್ದ ನೆನಪು ಸದಾ ಜೀವಂತವಾಗಿರುತ್ತದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular