Monday, April 21, 2025
Google search engine

Homeರಾಜ್ಯಬಾಣಂತಿಯರ ಸಾವು ಪ್ರಕರಣ : ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಣಂತಿಯರ ಸಾವು ಪ್ರಕರಣ : ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಈ ಕುರಿತು ಸಭೆ ಮಾಡಿದ್ದೇನೆ. ಡ್ರಗ್ಸ್ ಕಂಟ್ರೋಲರ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದೇನೆ ಎಂದು ತಿಳಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಯಾವ ಕಾರಣಕ್ಕೆ ಸಾವು ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ಕೆಲ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.ಈ ಒಂದು ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಪ್ರಮುಖ ನಿರ್ಧಾರಗಳನ್ನು ಕೂಡ ಈ ಒಂದು ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೆ ಪ್ರಮುಖವಾಗಿ ಮುಡಾ ವಿಚಾರದಲ್ಲಿ ಇಡಿ ಇಂದ ಲೋಕಾಯುಕ್ತಕ್ಕೆ ಪತ್ರ ವ್ಯವಹಾರ ಮಾಡಿರುವ ಕುರಿತಾಗಿ ಅನೌಪಚಾರಿಕ ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಅಲ್ಲದೆ ಇಡಿ ವಿರುದ್ಧ ಮುಂದಿನ ಕಾನೂನು ಹೋರಾಟದ ಕುರಿತು ಕೂಡ ಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೆ ಇನ್ನೂ ಕೆಲವೇ ದಿನಗಳಲ್ಲಿ ಬೆಳಕಾವಿಯಲ್ಲಿ ಅಧಿವೇಶನ ಕೂಡ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ಮಾಡಲು ಏನೆಲ್ಲ ಅಸ್ತ್ರಗಳನ್ನು ಉಪಯೋಗಿಸಲು ನಿರ್ಧರಿಸಿವೇಯೋ, ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಇಂದಿನ ಸಂಪುಟ ಸಭೆಯಲ್ಲಿ ಪ್ರಮುಖವಾದಂತಹ ವಿಷಯಗಳ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular