Saturday, April 19, 2025
Google search engine

Homeಅಪರಾಧಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಡಿಸೆಂಬರ್ 10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್ ಪರ ವಕೀಲರು ಹೈಕೋರ್ಟಿಗೆ ಈ ಒಂದು ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, ಹೀಗಾಗಿ ಸರ್ಜರಿ ಮಾಡಲು ಆಗುತ್ತಿಲ್ಲ ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದರು.

ಆದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್‌ ಪರ ವಕೀಲರು ಕೋರ್ಟ್ ಗೆ ಮೊರೆ ಹೋಗಿದ್ದಾರೆ. ಶಸ್ತ್ರಚಿಕಿತ್ಸೆ ಮಾಡುವವರೆಗೂ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲು ಸಾಧ್ಯವಿಲ್ಲ. ಹೀಗಾಗಿ ಬೇಲ್‌ ಅವಧಿ ವಿಸ್ತರಿಸಲು ಮಧ್ಯಂತರ ಆದೇಶ ನೀಡಬೇಕೆಂದು ವಕೀಲರು ಕೋರ್ಟ್ ಮೆಟ್ಟಿಲೇರಿದ್ದಾರೆ.

RELATED ARTICLES
- Advertisment -
Google search engine

Most Popular