Saturday, April 19, 2025
Google search engine

Homeರಾಜ್ಯಸುದ್ದಿಜಾಲಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬರ ಜವಬ್ದಾರಿ: ಶಾಸಕ ಡಿ.ರವಿಶಂಕರ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬರ ಜವಬ್ದಾರಿ: ಶಾಸಕ ಡಿ.ರವಿಶಂಕರ್

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಸಾಧಿಸಿ ಪ್ರತಿಯೊಬ್ಬ ವ್ಯಕ್ತಿಯು ಉನ್ನತ ಮತ್ತು ಉತ್ತಮ ಶಿಕ್ಷಣ ಪಡೆದಾಗ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂಬ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬರ ಜವಬ್ದಾರಿ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಹಾಸನ-ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ತಾಲೂಕು
ಆಡಳಿತ ವತಿಯಿಂದ ನಡೆದ ಅಂಬೇಡ್ಕರ್‌ರವರ ೬೮ನೇ ಪರಿನಿರ್ವಾಣ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಮಾತನಾಡಿದ ಅವರು ಹಿಂದುಳಿದ ಸಮಾಜದವರು ಶಿಕ್ಷಿತರಾಗಿ ರಾಷ್ಟçವನ್ನು ಅಭಿವೃದ್ದಿಯತ್ತ ಕೊಂಡೊಯ್ಯುವ ಸಾಮರ್ಥ್ಯಗಳಿಸಿಕೊಳ್ಳಬೇಕು ಎಂದರು.

ಜಗತ್ತಿಗೆ ಸರ್ವಶ್ರೇಷ್ಠವಾದ ಸಂವಿಧಾನ ನೀಡಿದ ಬಾಬಾಸಾಹೇಬರ ಹೆಸರು ಸೂರ್ಯ ಮತ್ತು ಚಂದ್ರರು ಇರುವವರೆಗೂ ಅಜರಾಮರವಾಗಿದ್ದು ಅವರು ನೀಡಿದ ಸಂವಿಧಾನದ ನೆರಳಲ್ಲಿ ನಾವೆಲ್ಲರೂ ಬದುಕು ಸಾಧಿಸುತ್ತಿದ್ದು ಇಂತಹ ಮಹಾನ್ ಪುರುಷ ಭಾರತದಲ್ಲಿ ಜನಿಸಿದ್ದು ನಮ್ಮೆಲ್ಲರ ಪುಣ್ಯ ವಿಶೇಷ ಎಂದು ಸಂತಸ ವ್ಯಕ್ತಪಡಿಸಿದ ಶಾಸಕರು ಪ್ರತಿಯೊಬ್ಬರು ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಪ್ರತಿಯೊಬ್ಬರು ಅಧ್ಯಯನ ಮಾಡಿ ಭವಿಷ್ಯದ
ಪೀಳಿಗೆಗೆ ಮನವರಿಕೆ ಮಾಡಿಕೊಡಬೇಕಿದ್ದು ಅವರ ಜಯಂತಿ ಸಂವಿಧಾನ ಅಂಗೀಕರಿಸಿದ ಮತ್ತು ಪರಿನಿರ್ವಾಣ
ದಿನಗಳನ್ನು ಆಚರಣೆಗೆ ಮಾತ್ರ ಸೀಮಿತ ಮಾಡದೆ ವರ್ಷವಿಡಿ ಎಲ್ಲರೂ ಸಂವಿಧಾನದ ಪೀಠಿಕೆಯನ್ನು ಅಧ್ಯಯನ ಮಾಡಬೇಕೆಂದು ಕರೆ ನೀಡಿದರು.

ಒಂದು ವರ್ಷದೊಳಗೆ ಈಗಿರುವ ಅಂಬೇಡ್ಕರ್ ಅವರ ಪ್ರತಿಮೆಯನ್ನು ಬದಲಿಸಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಿಸಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತಿತರರನ್ನು ಕರೆಯಿಸಿ ಬೃಹತ್ ಸಭೆ ನಡೆಸಿ ಪ್ರತಿಮೆ ಲೋಕಾರ್ಪಣೆ ಮಾಡಿಸುವುದಾಗಿ ತಿಳಿಸಿದರು.

ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ೨.೫ ಕೋಟಿ ರೂ ಮಂಜೂರಾಗಿದ್ದು ಆ ಪೈಕಿ ಪ್ರಸ್ತುತ ೪೦ ಲಕ್ಷ ಬಿಡುಗಡೆಯಾಗಿದ್ದು ಉಳಿಕೆ ಹಣವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಿಸಿಕೊಡುವುದರ ಜತೆಗೆ ಮತ್ತೆ ಹೆಚ್ಚುವಾರಿಯಾಗಿ ೨.೫ ಕೋಟಿ ನೀಡುವುದಾಗಿ ಸಮಾಜ
ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಭರವಸೆ ನೀಡಿದ್ದಾರೆ ಎಂದು ಪ್ರಕಟಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಪ್ರಭು ಉಪನ್ಯಾಸ ನೀಡಿದರು. ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಜಿ.ಪಂ.ಮಾಜಿ ಸದಸ್ಯರಾದ ಸಿದ್ದಪ್ಪ, ರಾಜಯ್ಯ, ನಾಗರತ್ನಶ್ರೀನಿವಾಸ್,
ದಲಿತ ಮುಖಂಡರಾದ ಹನಸೋಗೆನಾಗರಾಜು, ಡಿ.ಕೆ.ಕೊಪ್ಪಲುರಾಜಯ್ಯ, ಶಾಂತಿರಾಜ್, ಕಾಂತರಾಜು,
ಎಂ.ಲೋಕೇಶ್ ಮತ್ತಿತರರು ಮಾತನಾಡಿದರು.

ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ಶಂಕರ್, ಟಿಎಪಿಸಿಎಂಎಸ್ ಮಾಜಿ ಸದಸ್ಯ ತೋಟಪ್ಪನಾಯಕ,
ತಾ.ಪಂ. ಮಾಜಿ ಅಧ್ಯಕ್ಷ ಎಂ.ಹೆಚ್.ಸ್ವಾಮಿ, ಮಾಜಿ ಸದಸ್ಯ ಶ್ರೀನಿವಾಸಪ್ರಸಾದ್, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎಂ.ಎಸ್.ರವಿಕುಮಾರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶoಕರ್, ವಕ್ತಾರ ಸೈಯದ್‌ಜಾಬೀರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ತಾಲೂಕು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ಎಚ್.ಕುಮಾರ್, ಮುಖಂಡರಾದ ಹೆಚ್.ಎಸ್.ವೇಣುಗೋಪಾಲ್, ನಂದೀಶ್, ಹೆಚ್.ಬಿ.ಸಂಪತ್, ಪುಟ್ಟಣ್ಣಯ್ಯ, ತಿಮ್ಮಶೆಟ್ಟಿ, ವ್ಯಾನ್‌ಸುರೇಶ್, ಕೃಷ್ಣಯ್ಯ, ಸಮಾಜ ಕಲ್ಯಾಣಾಧಿಕಾರಿ ಶಂಕರ್‌ಮೂರ್ತಿ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular