ಚಾಮರಾಜನಗರ : ಇತ್ತೀಚಿಗೆ ಸಂದರ್ಶನ ಒಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರ ಹಂಚಿಕೆಯ ಕುರಿತಾಗಿ ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸ್ಪೋಟಕವಾದ ಹೇಳಿಕೆ ನೀಡಿದ್ದು, ನಾನು ಈಗ ರಾಜಕೀಯದ ಕೊನೆಗಾಲದಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.
ಇಂದು ಚಾಮರಾಜನಗರ ಜಿಲ್ಲೆಯಕೊಳ್ಳೇಗಾಲ ತಾಲೂಕಿನಸತ್ತೇಗಾಲದಲ್ಲಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಈಗ ರಾಜಕೀಯದಲ್ಲಿ ಕೊನೆಗಾಲದಲ್ಲಿ ಇದ್ದೇನೆ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಾ ಎಂದಿದ್ದರು. ಜೆ.ಎಚ್ ಪಟೇಲರಿಗೆ ಆಗಿನ ಕೆಲ ಶಾಸಕರು ಹೇಳಿದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ.
ಈ ಮೂಢನಂಬಿಕೆಯನ್ನು ರಾಚಯ್ಯ ನಂಬಲಿಲ್ಲ. ನಾನು ಸಹ ನಂಬಲಿಲ್ಲ ಎಂದು ತನ್ನ ಹಳೆಯ ಗುರುಗಳಾದ ಬಿ ರಾಚಯ್ಯರನ್ನ ವೇದಿಕೆ ಮೇಲೆ ಸಿಎಂ ಸಿದ್ಧರಾಮಯ್ಯ ನೆನೆದರು. ಚಾಮರಾಜನಗರ ಹೊಸ ಜಿಲ್ಲೆ ಎಂದು ಘೋಷಿಸಿದಾಗ ನಾನು ಡಿಸಿಎಂ ಆಗಿದ್ದೆ. ನಾವು ಚಾಮರಾಜನಗರಕ್ಕೆ ಬಂದು ಜಿಲ್ಲೆಯನ್ನು ಘೋಷಣೆ ಮಾಡಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೆ ವೇಳೆ ತಿಳಿಸಿದರು.