ಕೃಷ್ಣರಾಜನಗರ: ಕೃಷ್ಣರಾಜನಗರ ಪಟ್ಟಣದ ಅರ್ಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಕ್ಕ ಅನು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ದೇವಸ್ಥಾನದ ಸ್ವಚ್ಛತೆ ಕಾರ್ಯವನ್ನು ಅಕ್ಕ ಅನು ರವರು ಸ್ವತಃ ಅವರೇ ಮಾಡುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ದೇವಸ್ಥಾನಗಳ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು, ಅದರಂತೆ ಕೆ ಆರ್ ನಗರ ಪಟ್ಟಣ ಅರ್ಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛ ಕಾರ್ಯವನ್ನು ಮಾಡುವ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು ಎಂಬ ಅರಿವನ್ನು ಮೂಡಿಸಲಾಯಿತು ಎಂದರು.