ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ೧೯೨೪ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಸಿದ್ಧತೆಗಾಗಿ ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು ಸೋಮವಾರ (ಡಿ.೯) ಬೆಳಗಾವಿಯ ಪೀರನವಾಡಿಯ ಗಾಂಧಿಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕ ಆಸೀಫ್ (ರಾಜು) ಸೇಠ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಖಾತರಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ವಿನಯ್ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಇತರರು ಇದ್ದರು.