Saturday, April 19, 2025
Google search engine

Homeಅಪರಾಧಪ್ರವಾಸಕ್ಕೆ ಬಂದಾಗ ವಿದ್ಯಾರ್ಥಿನಿಯರು ಸಮುದ್ರಪಾಲು ಕೇಸ್ : ಅತಿಥಿ ಶಿಕ್ಷಕರು, ಡಿ ಗ್ರೂಪ್ ಸಿಬ್ಬಂದಿ ವಜಾ

ಪ್ರವಾಸಕ್ಕೆ ಬಂದಾಗ ವಿದ್ಯಾರ್ಥಿನಿಯರು ಸಮುದ್ರಪಾಲು ಕೇಸ್ : ಅತಿಥಿ ಶಿಕ್ಷಕರು, ಡಿ ಗ್ರೂಪ್ ಸಿಬ್ಬಂದಿ ವಜಾ

ಕೋಲಾರ : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಘೋರ ದುರಂತ ಒಂದು ಸಂಭವಿಸಿತ್ತು. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ 7 ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದ್ದು, ಓರ್ವ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ, ಘಟನೆಗೆ ಸಂಬಂಧಿಸಿದಂತೆ ಮುರಾರ್ಜಿ ವಸತಿ ಶಾಲೆಯ ಅತಿಥಿ ಶಿಕ್ಷಕರನ್ನು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾ ಗೊಳಿಸಲಾಗಿದೆ.

ಹೌದು ನಿನ್ನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿಯರನ್ನು ಶೈಕ್ಷಣಿಕ ಪ್ರವಾಸಕ್ಕೆ ಎಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಇಲ್ಲಿನ ಸಮುದ್ರದಲ್ಲಿ ಆಟ ಆಡುತ್ತಿದ್ದ ಸಂದರ್ಭದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ.ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕರಾಗಿರುವ ಕಾಂತರಾಜು ಅವರು ವಸತಿ ಶಾಲೆಯ ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾ ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ಸಿಬ್ಬಂದಿ ಕೆಲಸದಿಂದ ವಜಾ ಗೊಳಿಸಲಾಗಿದ್ದು, ನಿರ್ಲಕ್ಷತನ ಹಾಗೂ ಬೇಜಾಬ್ದಾರಿತನದ ಆರೋಪದ ಹಿನ್ನೆಲೆಯಲ್ಲಿ ಈ ಒಂದು ಕ್ರಮ ಕೈಗೊಳ್ಳಲಾಗಿದೆ. ಅಮಾನತು ಮಾಡಿ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ ಕಾಂತರಾಜು ಅವರು ಅತಿಥಿ ಶಿಕ್ಷಕರು ಹಾಗೂ ಡಿ ಗ್ರೂಪ್ ನೌಕರರ ವಿರುದ್ಧ ಈ ಒಂದು ಕ್ರಮ ಕೈಗೊಂಡಿದ್ದಾರೆ.


ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತೂರು ಶಾಲೆ ವತಿಯಿಂದ ಒಟ್ಟು ೫೪ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದು, ಇಂದು ಸಂಜೆ ಮುರ್ಡೇಶ್ವರ ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಇನ್ನುಳಿದ ಮೂವರುವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

RELATED ARTICLES
- Advertisment -
Google search engine

Most Popular