ಮೈಸೂರು : ನಗರದ ನರಸಿಂಹರಾಜ ಪೊಲೀಸ್ ಠಾಣೆಯ ಕನ್ನ ಕಳುವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಡಿ.೧೨ ರಂದು ನಗರದ ಮಂಡಿ ಮೊಹಲ್ಲಾದ ೨ನೇ ಈದ್ಗಾ ಬಳಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಆತನು ಮತ್ತೊಬ್ಬ ಆರೋಪಿಯೊಂದಿಗೆ ಸೇರಿ ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ೭ ಕನ್ನ ಕಳವು ಹಾಗೂ ೧ ದ್ವಿಚಕ್ರವಾಹನ ಕಳ್ಳತನ ಮಾಡಿರುವುದಾಗಿ ಒಪ್ಪಕೊಂಡ ಮೇರೆಗೆ ಆರೋಪಿತನಿಂದ ಒಟ್ಟು ೧೮ ಲಕ್ಷ ಬೆಲೆ ಬಾಳುವ ೨೧೭ ಗ್ರಾಂ ಚಿನ್ನ ಮತ್ತು ೧೫೬೦ ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಒಂದು ದ್ವಿಚಕ್ರವಾಹನವನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.