ಮೈಸೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಸಂತಾಪ ಸೂಚಿಸಿದ್ದಾರೆ.
ಸಜ್ಜನ ರಾಜಕಾರಣಿಯಾದ ಎಸ್.ಎಂ.ಕೃಷ್ಣ ಅವರು ಈ ರಾಜ್ಯದ ಅಭಿವೃದ್ಧಿಗೆ ಮತ್ತು ವಿಶೇಷವಾಗಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಕೊಡುಗೆಗಳನ್ನು ನೀಡಿದವರು. ಎಸ್.ಎಂ.ಕೃಷ್ಣ ಅವರ ನಿಧನದಿಂದ ಕರ್ನಾಟಕ ರಾಜ್ಯ ಓರ್ವ ಧೀಮಂತ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರೈತ ಸಂಘಟನೆಗಳ ಮಹಾ ಒಕ್ಕೂಟ ಪ್ರಾರ್ಥಿಸುತ್ತದೆ ಎಂದು ಕೃಷ್ಣೇಗೌಡ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.