Saturday, April 19, 2025
Google search engine

Homeರಾಜ್ಯಎಸ್ .ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಎಸ್ .ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular