Saturday, April 19, 2025
Google search engine

Homeರಾಜ್ಯಬೆಳಗಾವಿ ಲಾಠಿಚಾರ್ಜ್ ಗೆ ತೀವ್ರ ಖಂಡನೆ : ಇಂದು ರಾಜ್ಯಾದ್ಯಂತ ಹೋರಾಟಕ್ಕೆ ಪಂಚಮಸಾಲಿ ಶ್ರೀ ಕರೆ

ಬೆಳಗಾವಿ ಲಾಠಿಚಾರ್ಜ್ ಗೆ ತೀವ್ರ ಖಂಡನೆ : ಇಂದು ರಾಜ್ಯಾದ್ಯಂತ ಹೋರಾಟಕ್ಕೆ ಪಂಚಮಸಾಲಿ ಶ್ರೀ ಕರೆ

ಬೆಳಗಾವಿ : ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆದ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಇಂದು ರಾಜ್ಯಾದ್ಯಂತ ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಇನ್ನು ಮುಂದೆ ಚೆನ್ನಮ್ಮನಂತೆ ಕ್ರಾಂತಿಯ ಹೋರಾಟ ನಡೆಸುತ್ತೇವೆ. ನಿಮ್ಮ ನಿಮ್ಮ ಊರುಗಳಲ್ಲಿ ರಸ್ತೆ ತಡೆದು ಹೋರಾಟ ನಡೆಸಿ, ಇದುವರೆಗೂ ಲಿಂಗಾಯಿತ ವಿರೋಧಿ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ನಾವು ಹಾಗೆ ಅಂದುಕೊಂಡಿರಲಿಲ್ಲ. ಆದರೆ, ಈಗ ಆ ರೀತಿ ಅನಿಸುತ್ತಿದೆ. ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಹಲ್ಲೆ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ.

ಇನ್ನು ಬೆಳಗಾವಿಯಲ್ಲಿ 2ಎ ಮೀಸಲಾತಿ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಕಲ್ಲು ತೂರಿದವರ ಮೇಲೆ ಇದೀಗ ಪೊಲೀಸರು FIR ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular