ಬೆಂಗಳೂರು : ತುಮಕೂರಿನ ಮಾಜಿ ಶಾಸಕ ಆರ್, ನಾರಾಯಣ್ (81) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮಾಜಿ ಶಾಸಕ ಆರ್, ನಾರಾಯಣ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ನಾರಾಯಣ್ ಸೇವೆ ಸಲ್ಲಿಸಿದ್ದರು.
ಆರ್.ನಾರಾಯಣ ವಯೋಸಹಜ ಕಾಯಿಲೆಯಿಂದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.