Saturday, April 19, 2025
Google search engine

Homeರಾಜ್ಯ87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಇಂದು ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಇಂದು ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ

ಬೆಳಗಾವಿ : ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯರವರನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಮತ್ತು ಸಚಿವರಾದ ಚಲುವರಾಯಸ್ವಾಮಿ ನೇತೃತ್ವದ ಜಿಲ್ಲಾಡಳಿತದ ನಿಯೋಗ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಿತು.

ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಮಂಡ್ಯ ಜಿಲ್ಲಾಡಳಿತ ಹಾಗೂ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ, ಕನ್ನಡ ಸಾಹಿತ್ಯ ಷರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಇದೇ ವೇಳೆ ಹಾಜರಿದ್ದರು..

RELATED ARTICLES
- Advertisment -
Google search engine

Most Popular