Wednesday, April 16, 2025
Google search engine

Homeರಾಜ್ಯರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಶಾಸಕ ಜವರಾಯೇಗೌಡ ಪರವಾಗಿ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕವಿರುತ್ತದೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರ ಅನುಮತಿ ಕೊಟ್ಟ ಬಳಿಕ ಹೊಸ ಅಂಗನವಾಡಿ ಕೇಂದ್ರ ಪ್ರಾರಂಭ ಮಾಡೋದಾಗಿ‌ ತಿಳಿಸಿದರು.

ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20 ರಷ್ಟು ಇರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30 ರಷ್ಟಿರುತ್ತದೆ. ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65,931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3,988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3,988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.

ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ರೂ. 22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊoಡಿದೆ ಅಂತ ಉತ್ತರ ನೀಡಿದರು.

RELATED ARTICLES
- Advertisment -
Google search engine

Most Popular