ಗುಂಡ್ಲುಪೇಟೆ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂಖಹಳ್ಳಿ ಗ್ರಾಮದ ರಾಜು ಮೃತ ಯುವಕ. ಈತ ಬರಗಿ ಕಾಲೋನಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗುತ್ತಿದೆ. ಮೃತ ರಾಜು ಮನನೊಂದು ಕಳೆದ ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನಂತರ ಆತನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ನಿಧನಕ್ಕೆ ಪುರಸಭಾ ಸದಸ್ಯರಾದ ರಾಜ್ ಗೋಪಾಲ್ ಸಂತಾಪ ಸೂಚಿಸಿದ್ದಾರೆ.