ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರದಂದು ಹೈಕೋರ್ಟ್ ಕೊಲೆ ಆರೋಪಿಗಳಾದಂತಹ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಉಳಿದ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಆರೋಪಿ A1 ಪವಿತ್ರ ಗೌಡ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ತುಮಕೂರು ಹಾಗೂ ಕಲ್ಬುರ್ಗಿ ಕೇಂದ್ರ ಕಾರಾ ಗೃಹಗಳಲ್ಲಿ ಇತರೆ ಆರೋಪಿಗಳು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇದರ ಬೆನ್ನಲ್ಲೆ ಬಿಜಿಎಸ್ ಆಸ್ಪತ್ರೆಯಿಂದ ಇಂದು ಮಧ್ಯಾಹ್ನದ ಬಳಿಕ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ.
ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಂದು ಮನೆಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ಮಧ್ಯಾಹ್ನದ ಬಳಿಕ ದರ್ಶನ ಡಿಸ್ಚಾರ್ಜ್ ಸಾಧ್ಯತೆ ಎನ್ನಲಾಗಿದೆ.
ನಟ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ ಯಾಗುತ್ತಾರೆ ಎನ್ನುವ ಸುದ್ದಿ ತಿಳಿದ ತಕ್ಷಣವೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ನಟ ದರ್ಶನ್ ಅವರ ಅಭಿಮಾನಿಗಳು ಇದೀಗ ಅವರ ನಿವಾಸದ ಮುಂದೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆಯ ಬಳಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಅಭಿಮಾನಿಗಳು ದರ್ಶನ್ ಮನೆ ಎದುರು ಜಮಾಯಿಸುತ್ತಿದ್ದಾರೆ.