Saturday, April 19, 2025
Google search engine

Homeರಾಜ್ಯನಾಳೆ ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ನಾಳೆ ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2024 ರ 20,21 ಮತ್ತು 22 ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ 10.20ಕ್ಕೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

“ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು”, ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, “ಸಾಹಿತ್ಯದಲ್ಲಿ ರಾಜಕೀಯ – ರಾಜಕೀಯದಲ್ಲಿ ಸಾಹಿತ್ಯ” ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ.

ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕವಿಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂಧ ಕವಿಗಳು ಕವನವಾಚನ ಮಾಡಲಿದ್ದಾರೆ. ಮಹಿಳಾ ಕವಿಗಳ ಕವಿಗೋಷ್ಠಿ ನಡೆಯಲಿದೆ. 87ನೇ ಸಾಹಿತ್ಯ ಸಮ್ಮೇಳನವಾದ್ದರಿಂದ 87 ಸಾಧಕರನ್ನು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಕುರಿತು 50 ಸಾಧಕರನ್ನು ಒಟ್ಟಾಗಿ 137 ಸಾಧಕರನ್ನು ಸನ್ಮಾನಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular