ಪಿರಿಯಾಪಟ್ಟಣ: ಪಟ್ಟಣದ ಗೋಣಿಕೊಪ್ಪಲು ರಸ್ತೆಯ ಪಿಡಬ್ಲಿಯೋಡಿ ಕಚೇರಿಯ ಮುಂಭಾಗದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡದಲ್ಲಿ ದೀಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅನಾವರಣ ಗೊಳಿಸಲಾಗುವುದು ಎಂದು ಉದ್ಯಮಿ ಹೆಚ್.ಡಿ.ಗಣೇಶ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ವರ್ಷಗಳ ಹಿಂದೆ ಕೋವಿಡ್ ಸಂಕಷ್ಟದ ಸಮಯದಲ್ಲಿ ಜನತೆ ತಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಪರಿತಪಿಸಿದ್ದನ್ನು ಮನೆಗೊಂದು ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ಅವರ ಆರೋಗ್ಯವನ್ನು ರಕ್ಷಿಸಲು ಪಟ್ಟಣದಲ್ಲಿ ಅತ್ಯಂತ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವುಳ್ಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ.
ಈ ಲೋಕಾರ್ಪಣಾ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಪಶುಪಾಲನಾ ಹಾಗೂ ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನವರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಮುಖ್ಯಸ್ಥ ಡಾ.ಲೋಹಿತ್, ಮುಖಂಡರಾದ ಪುಟ್ಟರಾಜು, ಪಂಚವಳ್ಳಿ ಲೋಹಿತ್ ಉಪಸ್ಥಿತರಿದ್ದರು.