Sunday, April 20, 2025
Google search engine

Homeರಾಜ್ಯಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನು ಸಹ ಸಮರ್ಥಿಸಲ್ಲ: ಹೆಚ್‌.ಡಿ ಕುಮಾರಸ್ವಾಮಿ

ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನು ಸಹ ಸಮರ್ಥಿಸಲ್ಲ: ಹೆಚ್‌.ಡಿ ಕುಮಾರಸ್ವಾಮಿ

ನವದೆಹಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಖಂಡಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌ಡಿಕೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಅಂದ್ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular