Saturday, April 19, 2025
Google search engine

Homeರಾಜ್ಯಸಿ.ಟಿ ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಪೊಲೀಸರ...

ಸಿ.ಟಿ ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಪೊಲೀಸರ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆ ತಾರಕ್ಕೇರಿದಂತ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular